ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ: ಸಚಿವ ಡಿ.ಸುಧಾಕರ್

08:06 AM Jul 14, 2024 IST | Bcsuddi
Advertisement

 

Advertisement

ಚಿತ್ರದುರ್ಗ :   ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ ದೊರಕುವುದು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ, ನಗರದ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ “ಪತ್ರಿಕಾ ದಿನಾಚರಣೆ” ಉದ್ಘಾಟಿಸಿ ಅವರು ಮಾತನಾಡಿದರು.

ಮಾಧ್ಯಮಗಳು ಜನರ ವಿಶ್ವಾಸಕ್ಕೆ ಹತ್ತಿರವಾಗಬೇಕು. ಜನರು ಮಾಧ್ಯಮಗಳನ್ನು ಅತಿ ಸೂಕ್ಷ್ಮವಾಗಿ ಗಮನಿಸುತ್ತಾರೆ. ಜನಸಾಮಾನ್ಯರಲ್ಲಿ ಇಂದು ಟಿ.ವಿ ಹಾಗೂ ಪತ್ರಿಕೆಗಳ ಸುದ್ದಿಗಳನ್ನು ಅನುಮಾನದ ದೃಷ್ಠಿಯಿಂದ ನೋಡುವ ಪರಿಸ್ಥಿತಿ ಉಂಟಾಗಿದೆ. ಮಾಧ್ಯಮಗಳಲ್ಲಿ ಪ್ರಕಟವಾಗುವುದು ಸುಳ್ಳು ಎನ್ನುವ ಭಾವನೆ ಜನರಲ್ಲಿ ಮೂಡುತ್ತಿರುವುದು ಆತಂಕಕಾರಿಯಾಗಿದೆ. ಮುಖ್ಯ ವಾಹಿನಿಯ ಮಾಧ್ಯಮಗಳ ಜೊತೆಗೆ, ಸಾಮಾಜಿಕ ಮಾಧ್ಯಮಗಳು, ಯೂಟ್ಯೂಬ್‍ಗಳಲ್ಲಿಯೂ ಸುದ್ದಿಗಳ ಪ್ರಸಾರವಾಗುತ್ತಿದೆ. ಇವು ಮುಖ್ಯ ವಾಹಿನಿಯ ಮಾಧ್ಯಮಗಳಿಗೆ ಸಮಾನಾಂತರವಾಗಿ ಕಾರ್ಯ ನಿರ್ವಹಿಸುತ್ತಿವೆ. ಬದಲಾದ ಈ ಪರಿಸ್ಥಿತಿಯಿಂದ ಟಿ.ವಿ ಹಾಗೂ ಪತ್ರಿಕಾ ಮಾಧ್ಯಮಗಳು ಹೊರಬರಬೇಕು. ವಸ್ತುನಿಷ್ಠ, ನಿಖರ ಹಾಗೂ ಸತ್ಯವಾದ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಜನರ ನಂಬಿಕೆ ಗಳಿಸಬೇಕು. ಪತ್ರಿಕೆ ಮತ್ತು ಮಾಧ್ಯಮ ಪ್ರಜಾಪ್ರಭುತ್ವ ಹಾಗೂ ಸಮಾಜದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಚಿವ ಡಿ.ಸುಧಾಕರ್ ಅಭಿಪ್ರಾಯ ವ್ಯಕ್ತ ಪಡಿಸಿದರು.

ಸಂಸದ ಗೋವಿಂದ ಎಂ.ಕಾರಜೋಳ , ಪತ್ರಿಕಾ ದಿನಾಚರಣೆಯಲ್ಲಿ ಕನ್ನಡಪ್ರಭ ಹಾಗೂ ಏμÁ್ಯನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ , ಖಾತ್ಯ ಲೇಖಕ ಡಾ.ಬಾಲಗೋಪಾಲರಾವ್ , ಬಂಜೆಗೆರೆ ಜಯಪ್ರಕಾಶ್ ,ವಿಧಾನಪರಿಷತ್ ಶಾಸಕ ಕೆ.ಎಸ್.ನವೀನ್ ಶಾಸಕ ಕೆ.ಸಿ.ವೀರೇಂದ್ರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರ  ಅಧ್ಯಕ್ಷ ತಾಜ್‍ಪೀರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಸದಸ್ಯ ಎಂ.ಎನ್.ಅಹೋಬಲ ಪತಿ, ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಬಿ.ವಿ.ಮಲ್ಲಿಕಾರ್ಜುನಯ್ಯ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Tags :
ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ: ಸಚಿವ ಡಿ.ಸುಧಾಕರ್
Advertisement
Next Article