ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಫಾರಿ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್ ಏರಿದ ಚಿರತೆ

01:04 PM Oct 07, 2024 IST | BC Suddi
Advertisement

ಬೆಂಗಳೂರು : ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್ಸೊಂದನ್ನು ಚಿರತೆ ಏರಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.

Advertisement

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವುದು ಸಾಮಾನ್ಯವಾಗಿದೆ. ಅದರಂತೆ ಇದೀಗ ಇಂದು ಕೂಡ ಚಿರತೆ ಬಸ್ ಮೇಲೆ ಏರಿದ್ದು, ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಚಿರತೆಯು ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ.

ಕಳೆದ ಮೂರು ತಿಂಗಳ ಹಿಂದೆ ಉದ್ಯಾನವನದ ಕರಡಿ, ಸಿಂಹ ಸಫಾರಿಗಳಿಗೆ ಹೊಂದಿಕೊಂಡಂತೆ ಇರುವ ವಿಶಾಲ ತೆರೆದ ಆವರಣದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ ಒಂದೊಂದು ತಂಡವನ್ನು ಸಫಾರಿಗೆ ಬಿಡಲಾಗುತ್ತಿದೆ. ಸದ್ಯ ಚಿರತೆಗಳನ್ನು ಸಫಾರಿಯಲ್ಲಿ ನೋಡಿ ಪ್ರವಾಸಿಗರು ಖುಷಿ ಪಡುತ್ತಿದ್ದಾರೆ. ಇದೀಗ ಇಂದು ಬಸ್ ಮೇಲೆ ಚಿರತೆ ಏರಿದ್ದು ಕಂಡು ಕೆಲವರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇನ್ನು ಕೆಲವರು ಕಿಟಕಿಯಲ್ಲಿ ಚಿರತೆ ನೋಡಿ ಖುಷಿ ಪಟ್ಟಿದ್ದಾರೆ.

 

Advertisement
Next Article