ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

07:59 AM Sep 24, 2024 IST | BC Suddi
Advertisement

 

Advertisement

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಯೋಜನೆಯ ಕುರಿತು ಸವಿವರವಾಗಿ ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್  https://swdcorp.karnataka.gov.in     ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು  https://sevasindhu.karnataka.govt.in      ತಂತ್ರಾAಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 200766 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Advertisement
Next Article