For the best experience, open
https://m.bcsuddi.com
on your mobile browser.
Advertisement

ಸರ್ಕಾರದ ಐದನೇ ಉಚಿತ ಗ್ಯಾರಂಟಿ 'ಯುವ ನಿಧಿ'ಗೆ ಶಿವಮೊಗ್ಗದಲ್ಲಿ ಸಿಎಂ, ಡಿಸಿಎಂ ಚಾಲನೆ

03:21 PM Jan 12, 2024 IST | Bcsuddi
ಸರ್ಕಾರದ ಐದನೇ ಉಚಿತ ಗ್ಯಾರಂಟಿ  ಯುವ ನಿಧಿ ಗೆ ಶಿವಮೊಗ್ಗದಲ್ಲಿ ಸಿಎಂ  ಡಿಸಿಎಂ ಚಾಲನೆ
Advertisement

ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ಚಾಲನೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದು, ಚಿತ್ರದುರ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿದಂತೆ ಬೇರೆ ಬೆರೆ ಜಿಲ್ಲೆಗಳಿಂದ ಲಕ್ಷಾಂತರ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

Advertisement

2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೊಮಾ ತೇರ್ಗಡೆ ಹೊಂದಿದ ನಿರುದ್ಯೋಗಿಗಳು ಯೋಜನೆಗೆ ಅರ್ಹರಾಗಿದ್ದು, ಒಟ್ಟು 5.29 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನವಾಗಲಿದೆ.

Author Image

Advertisement