For the best experience, open
https://m.bcsuddi.com
on your mobile browser.
Advertisement

ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

08:23 AM May 25, 2024 IST | Bcsuddi
ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ನೇ ಸಾಲಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ರಾಷ್ಟಿçÃಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆಗೆ (NOS)      ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ. ರಾಷ್ಟಿçÃಯ ಸಾಗರೋತ್ತರ ಅರ್ಜಿಗಳನ್ನು ಸಲ್ಲಿಸಲು 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.

ಸಾಗರೋತ್ತರ ಪದವಿ, ಪಿ.ಹೆಚ್.ಡಿ ಉನ್ನತ ವ್ಯಾಸಾಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  https://overseas.tribal.gov.in     ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Tags :
Author Image

Advertisement