ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಾಲ ವಸೂಲಾತಿ ನ್ಯಾಯಮಂಡಳಿ ಪಾಸ್‌ಪೋರ್ಟ್‌ ವಶಕ್ಕೆ ಪಡೆಯುವ ಅಧಿಕಾರವಿಲ್ಲ - ಹೈಕೋರ್ಟ್

10:12 AM Dec 16, 2023 IST | Bcsuddi
Advertisement

ಬೆಂಗಳೂರು: ಸಾಲ ವಸೂಲಾತಿ ನ್ಯಾಯಮಂಡಳಿಗೆ (ಡಿಆರ್‌ಟಿ) ನಾಗರಿಕರಿಂದ ಪಾಸ್‌ಪೋರ್ಟ್‌ ವಶಕ್ಕೆ ಪಡೆದುಕೊಳ್ಳುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Advertisement

ಪಾಸ್‌ಪೋರ್ಟ್‌ ವಶಕ್ಕೆ ಪಡೆದಿದ್ದ ಡಿಆರ್‌ಟಿ ಕ್ರಮ ಪ್ರಶ್ನಿಸಿ ಮುಂಬೈ ಮೂಲದ ಶಂಭು ಕುಮಾರ್‌ ಕಸ್ಲಿವಾಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

೨೦೧೬ರಲ್ಲಿ ವಶಕ್ಕೆ ಪಡೆದಿರುವ ಪಾಸ್‌ಪೋರ್ಟ್‌ನ್ನು ಹಿಂದಿರುಗಿಸುವಂತೆ ಸೂಚನೆ ನೀಡಿದ ಕೋರ್ಟ್, ಡಿಆರ್‌ಟಿಯು ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸಲಿದೆ. ಈ ನ್ಯಾಯಾಲಯಕ್ಕೆ ಪಾಸ್‌ಪೋರ್ಟ್‌ನನ್ನು ತನ್ನ ವಶದಲ್ಲಿಟ್ಟುಕೊಳ್ಳುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.

ನಂದಾ ವಿರುದ್ಧದ ಸಿಬಿಐ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿರುವ ನ್ಯಾಯಪೀಠ, ಸಿಆರ್‌ಪಿಸಿ 102 ಅಥವಾ 104ರ ಅಡಿಯಲ್ಲಿ ಕ್ರಿಮಿನಲ್ ನ್ಯಾಯಾಲಯಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೂ ಪಾಸ್‌ಪೋರ್ಟ್ ಅನ್ನು ವಶಕ್ಕೆ ಪಡೆಯುವುದಕ್ಕೆ ಯಾವುದೇ ಅಧಿಕಾರವಿಲ್ಲ. ಅದೇ ರೀತಿಯಲ್ಲಿ ಡಿಆರ್‌ಟಿಗೂ ಅಧಿಕಾರವಿಲ್ಲ ಎಂದು ಪೀಠ ತಿಳಿಸಿದೆ.

Advertisement
Next Article