For the best experience, open
https://m.bcsuddi.com
on your mobile browser.
Advertisement

ಸಿಎಂ ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? - HDK ಪ್ರಶ್ನೆ

03:44 PM Oct 26, 2024 IST | BC Suddi
ಸಿಎಂ ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ    hdk ಪ್ರಶ್ನೆ
Advertisement

ಬೆಂಗಳೂರು: ಕುಮಾರಸ್ವಾಮಿ ಅವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಅಂದಿದ್ದಾರೆ. ಪಾಪ.. ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಾಸನಕ್ಕೆ ತೆರಳುವ ಮುನ್ನ ತಮ್ಮ‌ ನಿವಾಸದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯ ಸರ್ಕಾರ ಅಧಿಕಾರ, ಹಣದ ದುರ್ಬಳಕೆಯಿಂದ ಗೆದ್ದಾಗಿದೆ ಎಂದು ಬೀಗುತ್ತಿದ್ದಾರೆ. ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ. ಹೀಗಾಗಿ ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ. ಇಷ್ಟಾದರೂ ಕುತಂತ್ರ ಬೇರೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ. ನಾನು ಯಾರ‌ ಬಗ್ಗೆಯೂ ಟೀಕೆ ಮಾಡಲ್ಲ. ನನ್ನ ಕೆಲಸದ ಆಧಾರದಲ್ಲಿ ಮತ ಕೇಳುತ್ತೇನೆ ಎಂದು ತಿಳಿಸಿದರು.

Author Image

Advertisement