ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಿಎಂ ಪತ್ನಿಯಿಂದ ಮುಡಾ‌ ಸೈಟ್ ವಾಪಸ್ : ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? - ಆರ್ ಅಶೋಕ್

09:50 AM Oct 01, 2024 IST | BC Suddi
Advertisement

ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದರಾದ ಬೆನ್ನಲ್ಲೇ ಸಿಎಂ ಪತ್ನಿಯಿಂದ 14 ಸೈಟ್‌ಗಳನ್ನ ವಾಪಸಾತಿ ಬಗ್ಗೆ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪಾರ್ವತಿ ಪತ್ರ ಬರೆದಿರೋದು ಇದು ನಮ್ಮ ಹೋರಾಟಕ್ಕೆ ಮತ್ತೊಂದು ಜಯ ಸಿಕ್ಕಿದೆ ಹಾಗೇ ಸೈಟ್ ವಾಪಸಾತಿಯಿಂದ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ. ಸಿಎಂ ಪತ್ನಿ ಸೈಟ್ ವಾಪಸಾತಿ ಬಗ್ಗೆ ಪತ್ರ ಬರೆದಿರೋದ್ರ ಬಗ್ಗೆ ಆರ್ ಅಶೋಕ್ ತಮ್ಮ X ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು ಹೀಗೆ ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ. ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? 'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದಿದ್ದಾರೆ.

Advertisement

Advertisement
Next Article