ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು ಸಲ್ಲಿಕೆ

05:12 PM Jul 16, 2024 IST | Bcsuddi
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದೆ.

Advertisement

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಸಿದ್ದಾರೆ. 2018-23ರ ಚುನಾವಣೆಯ ಅಫಿಡವಿಟ್ ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಒಂದು ದೂರು ಸಲ್ಲಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ಸಂದರ್ಭ ಸಿದ್ದರಾಮಯ್ಯ ಅವರು ನೀಡಿದ್ದ ಅಫಿಡವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ. ಎಂದು ನಮೂದಿಸಿದ್ದಾರೆ. ಆದರೆ, 2005ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್ ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿದೆ.

ಆದರೆ ಮುಡಾದ 14 ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿ ರೂಪಾಯಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಟಿ.ಜೆ.ಅಬ್ರಹಾಂ ಅವರು ಮುಖ್ಯ ಚುನಾವಣಾಧಿಕಾರಿಗೆ ಎರಡನೇ ದೂರು ಸಲ್ಲಿಕೆ ಮಾಡಿದ್ದಾರೆ.

 

Advertisement
Next Article