For the best experience, open
https://m.bcsuddi.com
on your mobile browser.
Advertisement

ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ- ಸಿಎಂ ಗರಂ

06:24 PM Jun 27, 2024 IST | Bcsuddi
ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ  ಸಿಎಂ ಗರಂ
Advertisement

ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

Advertisement

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಹೇಳಿದರು.

Author Image

Advertisement