For the best experience, open
https://m.bcsuddi.com
on your mobile browser.
Advertisement

ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೊಳಗಾದ ದೇಶದ ಮೊದಲ ನಾಯಕ ಕೇಜ್ರಿವಾಲ್ - ರಾಜೀನಾಮೆ ಇಲ್ಲ, ಜೈಲಿನಿಂದಲೇ ಆಡಳಿತ

12:36 PM Mar 22, 2024 IST | Bcsuddi
ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೊಳಗಾದ ದೇಶದ ಮೊದಲ ನಾಯಕ ಕೇಜ್ರಿವಾಲ್   ರಾಜೀನಾಮೆ ಇಲ್ಲ  ಜೈಲಿನಿಂದಲೇ ಆಡಳಿತ
Advertisement

ನವದೆಹಲಿ: ದೆಹಲಿಯಲ್ಲಿ ಭಾರೀ ಸದ್ದು ಮಾಡಿದ್ದ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಹಾಗೂ ಆಪ್ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಸಾಕಷ್ಟು ಬಾರಿ ಸಮನ್ಸ್ ನೀಡಿದರೂ, ವಿಚಾರಣೆಗೆ ಹಾಜರಾಗದ ಹಿನ್ನಲೇ, ದೆಹಲಿ ಹೈಕೋರ್ಟ್ ಅರವಿಂದ ಕೇಜ್ರಿವಾಲ್ ಅವರಿಗೆ ಇಡಿ ಬಂಧನದಿಂದ ರಕ್ಷಣೆ ನೀಡಿಲು ನಿರಾಕರಿಸಿತ್ತು. ಹೀಗಾಗಿ ಇ.ಡಿ ಅಧಿಕಾರಿಗಳ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿ, ಅವರನ್ನು ಬಂಧಿಸಿದ್ದಾರೆ. ಅಧಿಕಾರದಲ್ಲಿದ್ದಾಗಲೇ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಸಿಎಂ ಹುದ್ದೆಯಲ್ಲಿದ್ದಾಗ ಬಂಧಿತನಾದ ದೇಶದ ಮೊದಲ ನಾಯಕ ಅವರಾಗಿದ್ದಾರೆ. ಬಂಧನಕ್ಕೊಳಗಾದರೂ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಅವರು ತಮ್ಮ ಎಲ್ಲಾ ಖಾತೆಗಳನ್ನು ತ್ಯಜಿಸಲಿದ್ದಾರೆ. ಜೈಲಿನಿಂದಲೇ ಆಡಳಿತ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಹೇಳಿದ್ದಾರೆ. ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್, ಮನೀಶ್ ಸಿಸೊಡಿಯಾ, ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಮತ್ತು ತೆಲಂಗಾಣದ ಬಿ.ಆರ್.ಎಸ್. ಪಕ್ಷದ ಶಾಸಕಿ ಕವಿತಾ ಅವರ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

Author Image

Advertisement