ಸಿಜೆಐ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಪ್ರಧಾನಿ ಮೋದಿ- ಸಂಜಯ್ ರಾವತ್ ಆಕ್ಷೇಪ
ನವದೆಹಲಿ : ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗಣೇಶೋತ್ಸವ ಸಮಯದಲ್ಲಿ ಸಿಜೆಐ ನಿವಾಸಕ್ಕೆ ಆಗಮಿಸಿದ ಮೋದಿ ಗಣಪತಿಗೆ ಆರತಿ ಎತ್ತಿದ್ದರು. ಈ ವಿಚಾರವನ್ನು ರಾವತ್ ಪ್ರಸ್ತಾಪ ಮಾಡಿ ಹಲವು ಪ್ರಶ್ನೆ ಎತ್ತಿದ್ದಾರೆ. ಗಣಪತಿ ಹಬ್ಬ ನಡೆಯುತ್ತಿದೆ, ಜನರು ಪರಸ್ಪರರ ಮನೆಗೆ ಭೇಟಿ ನೀಡುತ್ತಾರೆ. ಪ್ರಧಾನಿ ಇದುವರೆಗೆ ಎಷ್ಟು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ. ಆದರೆ ಪ್ರಧಾನಮಂತ್ರಿಯವರು ಸಿಜೆಐ ಮನೆಗೆ ತೆರಳಿ ಆರತಿ ಬೆಳಗಿದ್ದಾರೆ ಎಂದು ಟೀಕಿಸಿದ್ದಾರೆ.
ಸಂವಿಧಾನದ ಪಾಲಕರು ರಾಜಕಾರಣಿಗಳನ್ನು ಭೇಟಿ ಮಾಡಿದರೆ, ಅದು ಜನರ ಮನಸ್ಸಿನಲ್ಲಿ ಅನುಮಾನವನ್ನು ಉಂಟುಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ಪ್ರಕರಣದಲ್ಲಿ ಕೇಂದ್ರ ಸರ್ಕಾರವು ಪ್ರತಿವಾದಿಯಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಪ್ರಕರಣದಿಂದ ದೂರವಿರಬೇಕು. ಪ್ರಕರಣದ ಪ್ರತಿವಾದಿಯ ಜೊತೆ ಅವರ ನಂಟು ಬಹಿರಂಗವಾಗಿ ಕಾಣುತ್ತಿದೆ. ಪ್ರಕರಣದಲ್ಲಿ ನಮಗೆ ಸಿಜೆಐ ನ್ಯಾಯ ನೀಡಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಸಂಜಯ್ ರಾವತ್ ಕೇಳಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ