ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್ - ಎಫ್​ಐಆರ್​ ದಾಖಲು

09:36 AM Jan 14, 2024 IST | Bcsuddi
Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದವರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ IPC ಸೆಕ್ಷನ್ 153,153A,505(2) ಅಡಿ ಎಫ್​ಐಆರ್​ ದಾಖಲಿಸಲಾಗಿದೆ.

Advertisement

ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಫೇಸ್​ಬುಕ್, ಇನ್ಸ್​ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದು, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ, ಕಾಂಗ್ರೆಸ್​ ಮುಖಂಡ ಸಂಜಯ್ ಯಾದವ್ ದೂರು ಆಧರಿಸಿ ಪೊಲೀಸರು ಎಫ್​ಐಆರ್​​ ದಾಖಲಿಸಿದ್ದಾರೆ.

ಇನ್ನು ‘ಕೃತಿಕಾ ಕೃತಿ’ ಎಂಬ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ವಿರುದ್ಧ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಿದ್ದು, ಈ ಪೋಸ್ಟ್‌ಗಳನ್ನು ಹಾಕಿದವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Advertisement
Next Article