For the best experience, open
https://m.bcsuddi.com
on your mobile browser.
Advertisement

'ಸಿದ್ದರಾಮಯ್ಯ ರಾಜೀನಾಮೆ ಮುಹೂರ್ತ ನಿಗದಿ'- ವಿಜಯೇಂದ್ರ

05:00 PM Nov 05, 2024 IST | BC Suddi
 ಸಿದ್ದರಾಮಯ್ಯ ರಾಜೀನಾಮೆ ಮುಹೂರ್ತ ನಿಗದಿ   ವಿಜಯೇಂದ್ರ
Advertisement

ಬೆಂಗಳೂರು : ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ; ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ ಎಂದ ಅವರು, 5 ವರ್ಷ ಕಾಲ ಸಿಎಂ ಆಗಿರುವುದಾಗಿ ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಹೇಳಲಿ; ನೋಡೋಣ ಎಂದು ಸವಾಲು ಹಾಕಿದರು.

Advertisement

ಮುಖ್ಯಮಂತ್ರಿಗಳು ಮತ್ತವರ ಕುಟುಂಬ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನತೆಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೋಟಿಸ್ ಕೊಟ್ಟು ತನಿಖೆಗೆ ಬರಲು ತಿಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ತನಿಖೆ ಎದುರಿಸುತ್ತೀರಾ? ಆರೋಪಿಯಾಗಿ ಹೋಗುವಿರಾ? ಎಂಬುದನ್ನು ಜನತೆಗೆ ತಿಳಿಸಿ ಎಂದು ಒತ್ತಾಯಿಸಿದರು.

ವಕ್ಫ್ ವಿಷಯದಲ್ಲಿ ಸಿಎಂ ಕುಮ್ಮಕ್ಕು:
ಒಂದು ಕಡೆ ವಾಲ್ಮೀಕಿ ನಿಗಮದ ಹಗರಣ, ಇನ್ನೊಂದೆಡೆ ಮೈಸೂರಿನ ಮುಡಾ ಹಗರಣ, ಮತ್ತೊಂದೆಡೆ ಒಬ್ಬ ಬೇಜವಾಬ್ದಾರಿ ಸಚಿವ ಜಮೀರ್ ಅಹಮದ್ ಅವರನ್ನು ಹಿಡಿದುಕೊಂಡು ವಕ್ಫ್ ಬೋರ್ಡಿಗೆ ರೈತರ ಜಮೀನು ಹೊಡೆಯುತ್ತಿದ್ದಾರೆ. ಮಠ ಮಾನ್ಯಗಳ ಜಮೀನು ಕಸಿಯುವ ಪ್ರಯತ್ನ ನಡೆದಿದೆ. ಜಮೀರ್ ಅಹಮದ್ ಷಡ್ಯಂತ್ರದ ಹಿಂದೆ ಮುಖ್ಯಮಂತ್ರಿಗಳ ಕುಮ್ಮಕ್ಕು ಇದೆ ಎಂದು ವಿಜಯೇಂದ್ರ ಅವರು ಆರೋಪಿಸಿದರು.

Author Image

Advertisement