For the best experience, open
https://m.bcsuddi.com
on your mobile browser.
Advertisement

ಸಿಹಿಸುದ್ದಿ: ಗೃಹಲಕ್ಷ್ಮಿ ಜೂನ್‌, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ

11:29 AM Jul 31, 2024 IST | BC Suddi
ಸಿಹಿಸುದ್ದಿ  ಗೃಹಲಕ್ಷ್ಮಿ  ಜೂನ್‌  ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ
Advertisement

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ನೀಡಿದ್ದು, ಗೃಹಲಕ್ಷ್ಮಿ ಹಣ ಮೂರ್ನಾಲ್ಕು ತಿಂಗಳಿನಿಂದ ಬರುತ್ತಿಲ್ಲ ಎನ್ನುವುದು ತಪ್ಪು, ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಹಾಕಿದ್ದೇವೆ. ಜೂನ್‌, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡಿಬಿಟಿ ಪುಶ್‌ ಮಾಡುತ್ತಿದ್ದೇವೆ. 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು.

ಆಗಸ್ಟ್‌ ಮೊದಲ ವಾರವೇ ಜೂನ್‌, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದ್ದಾರೆ.

Advertisement
Author Image

Advertisement