For the best experience, open
https://m.bcsuddi.com
on your mobile browser.
Advertisement

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ - ಮೂವರು ಮೃತ್ಯು

09:14 AM Jan 29, 2024 IST | Bcsuddi
ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ   ಮೂವರು ಮೃತ್ಯು
Advertisement

ಮಂಗಳೂರು: ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು.

ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು ಎನ್ನಲಾಗಿದೆ.

Advertisement

ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ.

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Author Image

Advertisement