ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸುಪ್ರೀಂನ ಮುಂದಿನ ಸಿಜೆಐ ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

11:22 AM Oct 17, 2024 IST | BC Suddi
Advertisement

ನವದೆಹಲಿ:  ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Advertisement

ಮುಂದಿನ ನವೆಂಬರ್ 11ರಂದು ಸಿಜೆಐ ಹುದ್ದೆಯಿಂದ ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಮುಂದಿನ ಶಿಫಾರಸು ಕಳುಹಿಸುವಂತೆ ಕೇಂದ್ರ ಸರ್ಕಾರ ಕಳೆದ ಶುಕ್ರವಾರ ಚಂದ್ರಚೂಡ್ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಸಂಜೀವ್ ಖನ್ನಾ 51ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸಿಜೆಐ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ 2 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಬಳಿಕ ನವೆಂಬರ್ 10 ರಂದು ನಿವೃತ್ತರಾಗಲಿದ್ದಾರೆ. ಅವರು 2022ರ ಡಿಸೆಂಬರ್ 17ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇನ್ನು ನ್ಯಾ. ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ನ್ಯಾ. ಸಂಜೀವ್ ಖನ್ನಾ ಅವರು 2025ರ ಮೇನಲ್ಲಿ ನಿವೃತ್ತರಾಗಲಿದ್ದಾರೆ.

 

Advertisement
Next Article