ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಸೂರಜ್ ರೇವಣ್ಣ ವಿರುದ್ಧ ಅಧಿಕೃತ ದೂರು ಬಂದ ಮೇಲೆ ಕ್ರಮ'- ಜಿ. ಪರಮೇಶ್ವರ್

12:59 PM Jun 22, 2024 IST | Bcsuddi
Advertisement

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

Advertisement

ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅವರನ್ನ ಭೇಟಿ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ವಿರುದ್ಧ ಆರೋಪ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನನಗೆ ಇದುವರೆಗೆ ಯಾವುದೇ ಪತ್ರ ಬಂದಿಲ್ಲ. ದೂರು ಕೂಡ ಬಂದಿಲ್ಲ. ಸೂರಜ್ ರೇವಣ್ಣ ಆಗಲಿ, ಆ ದೂರುದಾರ ಆಗಲಿ ಎಲ್ಲಿಯೂ ದೂರು ನೀಡಿಲ್ಲ. ಯಾವುದೇ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ. ಸೂರಜ್ ರೇವಣ್ಣ ಪರ ಶಿವಕುಮಾರ್ ಎಂಬುವವರು ದೂರು ದಾಖಲಿಸಿದ್ದಾರೆ ಎಂದು ಹೇಳಿದರು.

ಇನ್ನೂ ಸೂರಜ್ ರೇವಣ್ಣ ಅವರ ಪ್ರಕರಣವನ್ನು ಸಿಐಡಿಗೆ ವಹಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲು ದೂರು ದಾಖಲಾಗಬೇಕು. ಪತ್ರ ಬರೆದ ತಕ್ಷಣ ಆಗಲ್ಲ. ಅವರು ಪತ್ರ ಬರೆದಿದ್ದೇವೆ ಅಂತಾರೆ, ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣ ಏನಾಗುತ್ತೆ ಎಂದು ಕಾದು ನೋಡೋಣ. ಅಧಿಕೃತ ದೂರು ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣವನ್ನು ಸಿಐಡಿಗೆ ವಹಿಸುವ ನಿರ್ಧಾರ ಮಾಡುತ್ತೇವೆ ಎಂದರು.

 

Advertisement
Next Article