ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸೂರತ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 24 ಕಾರ್ಮಿಕರಿಗೆ ಗಾಯ

01:46 PM Nov 29, 2023 IST | Bcsuddi
Advertisement

ಗಾಂಧಿನಗರ: ಟ್ಯಾಂಕ್‍ನಲ್ಲಿ ಸಂಗ್ರಹಿಸಿದ್ದ ರಾಸಾಯನಿಕ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 24 ಕಾರ್ಮಿಕರು ಗಾಯಗೊಂಡಿರುವ ಘಟನೆ ಗುಜರಾತ್‍ನ ಸೂರತ್ ನಗರದ ರಾಸಾಯನಿಕ ಕಾರ್ಖಾನೆ ಒಂದರಲ್ಲಿ ನಡೆದಿದೆ.

Advertisement

ಸೂರತ್ ನಗರದ ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಾತ್ರಿ 2 ರಿಂದ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡ ತೊಟ್ಟಿಯೊಳಗೆ ಶೇಖರಿಸಲಾದ ರಾಸಾಯನಿಕಗಳು ಸೋರಿಕೆಗೊಂಡ ಪರಿಣಾಮ ಸ್ಫೋಟ ಸಂಭವಿಸಿದ್ದು ಬೆಂಕಿ ಕಾಣಿಸಿಕೊಂಡಿದೆ. ಇನ್ನು ಈ ಘಟನೆಯಲ್ಲಿ 24 ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಮೂರು ಅಂತಸ್ತಿನ ಕಟ್ಟಡದ ಪೂರ್ತಿ ಬೆಂಕಿ ಆವರಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಸ್ಫೋಟ ಸಂಭವಿಸಿದಾಗ ಕಾರ್ಖಾನೆಯೊಳಗೆ ಎಷ್ಟು ಕಾರ್ಮಿಕರಿದ್ದರು ಎಂಬುದರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿರುವ ರಾಸಾಯನಿಕ ವಸ್ತುಗಳು ಬೆಂಕಿಗೆ ಆಹುತಿಯಾಗಿರುವುದರಿಂದ ಕಾರ್ಖಾನೆಯ ಸುತ್ತಲು ದಟ್ಟ ಹೊಗೆ ಆವರಿಸಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Next Article