ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸೇಬು ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು

09:00 AM Sep 05, 2024 IST | BC Suddi
Advertisement

ಸಾಮಾನ್ಯವಾಗಿ ಸೇಬು ಹಣ್ಣು ಎಲ್ಲರಿಗೂ ಇಷ್ಟವಾಗುವ ಹಣ್ಣು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜತೆಗೆ ರೋಗದ ಅಪಾಯವನ್ನು ತಡೆಗಟ್ಟುತ್ತದೆ. ಸಾಕಷ್ಟು ಪ್ರಮಾಣದ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಮಧುಮೇಹ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

Advertisement

ಹಣ್ಣುಗಳು ಎಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಇಷ್ಟ. ಒಂದೊಂದು ಹಣ್ಣು ಕೂಡಾ ಪೋಷಕಾಂಶಗಳನ್ನು ಹೊಂದಿರುತ್ತದೆ. ಅತಿಯಾಗಿ ತಿಂದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳುವುದು ಉತ್ತಮ. ಸೇಬು ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆಸೇಬು ಹಣ್ಣುಗಳಲ್ಲಿ ಪಾಲಿಫಿನಾಲ್​ನಿಂದ ಸಮೃದ್ಧವಾಗಿದೆ.

ದೇಹವನ್ನು ಆರೋಗ್ಯವಾಗಿಡಲು ಇದು ಸಹಾಯಕವಾಗಿದೆ. ಜತೆಗೆ ಫೈಬರ್ ಅಂಶವನ್ನು ಹೆಚ್ಚು ಹೊಂದಿರುವುದರಿಂದ ಆರೋಗ್ಯಕ್ಕೆ ಉತ್ತಮ. ತೂಕ ನಷ್ಟಕ್ಕೆ ಸಹಾಯಕ :ಫೈಬರ್​ನಲ್ಲಿ ನೀರಿನ ಅಂಶ ಹೆಚ್ಚಾಗಿರುವದರಿಂದ ಜತೆಗೆ ಕರಗುವ ಫೈಬರ್ ಕೊಲೆಸ್ಟ್ರಾಲ್ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸೇಬು ಹಣ್ಣಿನಲ್ಲಿರುವ ಪಾಲಿಫಿನಾಲ್​ಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಮಧುಮೇಹ ಅಪಾಯವನ್ನು ಕಡಿಮೆ ಮಾಡುತ್ತದೆ :ದಿನಕ್ಕೆ ಒಂದು ಸಂಪೂರ್ಣ ಸೇಬು ಹಣ್ಣನ್ನು ಸೇವಿಸುವುದರಿಂದ ಟೈಪ್ 2 ಮಧುಮೇಹ ಅಪಾಯವನ್ನು ಶೇ. 28ರಷ್ಟು ಕಡಿಮೆ ಮಾಡಬಹುದು. ಜತೆಗೆ ಅಸ್ತಮಾ ಅಪಾಯವನ್ನು ಕಡಿಮೆ ಮಾಡುತ್ತದೆ. ಸೇಬು ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ರೋಗ ಅಪಾಯವನ್ನು ಕಡಿಮೆ ಮಾಡುತ್ತದೆ. ಜತೆಗೆ ಆರೋಗ್ಯದ ಸ್ಥಿತಿಯನ್ನು ಸುಧಾರಿಸುತ್ತದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article