ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ಆದೇಶ

04:35 PM Aug 30, 2024 IST | BC Suddi
Advertisement

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ.

Advertisement

ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಲಾಗಿದೆ. ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂದು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಈಗ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಮರು ತನಿಖೆ ಕೋರಿ ಸೌಜನ್ಯ ಪೋಷಕರು ತಾಯಿ ಕುಸುಮಾವತಿ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರ ಜೊತೆಗೆ ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ಕೂಡ ವಜಾ ವಜಾಗೊಳಿಸಲಾಗಿದೆ.

ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರ ಪೀಠದಿಂದ ಆದೇಶ ಹೊರಬಿದ್ದಿದೆ. ಈ ಮೂಲಕ ಮೂರೂ ಅರ್ಜಿಗಳನ್ನ ವಜಾಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

2012ರ ಅ.9ರಂದು ಸೌಜನ್ಯಳನ್ನ ಅಪಹರಿಸಿ ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಸಂತೋಷ್‌ ರಾವ್‌ ಅನ್ನು ಬಂಧಿಸಿದ್ದರು. ನಂತರ ಪ್ರಕರಣ  ತನಿಖೆಯನ್ನು ಸಿಐಡಿ ವರ್ಗಾವಣೆ ಆಗಿತ್ತು. ಬಳಿಕ ಪ್ರಕರಣದ ತನಿಖೆ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಸೆಷನ್ಸ್‌ ಕೋರ್ಟ್ ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ನನ್ನ ಖುಲಾಸೆಗೊಳಿಸಿತ್ತು. 2023ರ ಜೂ.16ರಂದು ಸೆಷನ್ಸ್ ಕೋರ್ಟ್ ಆದೇಶ ಮಾಡಿತ್ತು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article