For the best experience, open
https://m.bcsuddi.com
on your mobile browser.
Advertisement

ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

07:59 AM Aug 07, 2024 IST | BC Suddi
ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಅಯೋಗವು ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗೆ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 17 ಅರ್ಜಿ ಸಲ್ಲಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಬಯಸುವವರು ಪಿಯುಸಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು. ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ಟೆನೋಗ್ರಾಫರ್ ಗ್ರೇಡ್ ಸಿ ಅಭ್ಯರ್ಥಿಗಳಿಗೆ 18-30 ವರ್ಷಗಳು, ಗ್ರೇಡ್ ಡಿ ಅಭ್ಯರ್ಥಿಗಳಿಗೆ 18-27 ವರ್ಷಗಳು, (ಎಸ್.ಟಿ, ಎಸ್.ಸಿ, ಒಬಿಸಿ, ಇಎಸ್‌ಎಂ) ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

Advertisement

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ಆಯೋಗದ ವೆಬ್‌ಸೈಟ್  www.ssckkr.kar.nic.in/  https://ssc.nic.in      ವೆಬ್‌ಸೈಟ್ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520, ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Author Image

Advertisement