ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸ್ನೇಹಿತ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿ

02:03 PM Jul 14, 2024 IST | Bcsuddi
Advertisement

ನವದಹೆಲಿ:ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

Advertisement

ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ನಾನು ತೀವ್ರ ಕಳವಳಗೊಂಡಿದ್ದೇನೆ ಎಂದು ಹೇಳಿದ್ದಾರೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಳವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ತಿಂಗಳುಗಳ ಮೊದಲೇ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಟ್ರಂಪ್‌ ಕಿವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ದುರ್ಘಟನೆಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಮಾಜಿ ಅಧ್ಯಕ್ಷ ಬರಕ್‌ ಒಬಾಮಾ ಸೇರಿದಂತೆ ಅನೇಕ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.

 

Advertisement
Next Article