ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ: ನಗರದ ಸಂಚಾರಿ ಮಾರ್ಗಗಳಲ್ಲಿ ಭಾರಿ ಬದಲಾವಣೆ.!

07:11 AM Oct 04, 2024 IST | BC Suddi
Advertisement

 

Advertisement

 ದಾವಣಗೆರೆ; ;  ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ಅಕ್ಟೋಬರ್ 5 ರಂದು ನಡೆಯಲಿರುವುದರಿಂದ ಬೆಳಗ್ಗೆ 10 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿನ ವಾಹನ ಸಂಚಾರಿ ಮಾರ್ಗದಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ

ಬದಲಾವಣೆಯ ಮಾರ್ಗಗಳ ವಿವರ; ಹರಿಹರ ಕಡೆಯಿಂದ ಬಾತಿ ಮೂಲಕ ಹಳೇ ಪಿ.ಬಿ ರಸ್ತೆಯಲ್ಲಿ ಬರುವ ಎಲ್ಲಾ ತರಹದ ಭಾರಿ ವಾಹನಗಳು ಮತ್ತು ಖಾಸಗಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ಎ.ಪಿ.ಎಂ.ಸಿ ದನದ ಮಾರ್ಕೇಟ್ ಆವರಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ತೆರಳುವುದು.

ಹರಿಹರ ಕಡೆಯಿಂದ ಬಾತಿ ಮೂಲಕ ಹಳೇ ಪಿ.ಬಿ ರಸ್ತೆಯಲ್ಲಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಕಾರ್ಯನಿರ್ವಹಿಸುವುದು.

ಚಿತ್ರದುರ್ಗ ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಬರುವ ವಾಹನಗಳು ಮತ್ತು ಖಾಸಗಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ಎ.ಪಿ.ಎಂ.ಸಿ ಯ ದನದ ಮಾರ್ಕೇಟ್ ಆವರಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಸಾಗುವುದು.

ಚಿತ್ರದುರ್ಗ ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಬಂದು ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮಾರ್ಗವಾಗಿ ಕಾರ್ಯನಿರ್ವಹಿಸುವುದು.

ಜಗಳೂರು ಮತ್ತು ಕಂಚಿಕೆರೆ ಮಾರ್ಗವಾಗಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ವೆಂಕಟೇಶ್ವರ ಸರ್ಕಲ್‍ನಿಂದ ಬಂಬೂಬಜಾರ್ ರಸ್ತೆ ಮಾರ್ಗವಾಗಿ ಆರ್.ಎಂ.ಸಿ ಫೈ ಓವರ್ ಮುಖಾಂತರ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ವಾಪಾಸ್ ಅದೇ ಮಾರ್ಗವಾಗಿ ಕಾರ್ಯ ನಿರ್ವಹಿಸುವುದು.

ಚನ್ನಗಿರಿ ಕಡೆಯಿಂದ ಹದಡಿ ರಸ್ತೆ ಮೂಲಕ ಬರುವ ಎಲ್ಲಾ ತರಹದ ವಾಹನಗಳು ಮತ್ತು ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹದಡಿ ಅಂಡರ್ ಪಾಸ್ ಮೂಲಕ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ವಾಪಾಸ್ ಹೊರಡುವುದು.

ಶಾಮನೂರು ಬೈಪಾಸ್ ಮೂಲಕ ಬರುವ ಎಲ್ಲಾ ತರಹದ ಭಾರಿ ವಾಹನಗಳು ಶಾರದಾಂಭ ಸರ್ಕಲ್ ಮೂಲಕ ಬಾಲಾಜಿ ಸರ್ಕಲ್ ಕಡೆ ಚಲಿಸುವುದು, ಸಂಗೊಳ್ಳಿ ರಾಯಣ್ಣ ಸರ್ಕಲ್ ಕಡೆ ಬಾರದೇ ಜಿ.ಎಂ.ಐ.ಟಿ ಕಾಲೇಜ್ ಕಡೆ ಚಲಿಸುವುದು.

ಕೊಂಡಜ್ಜಿ ಮಾರ್ಗವಾಗಿ ಬರುವ ವಾಹನಗಳು, ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಆರ್.ಟಿ.ಓ ಸರ್ಕಲ್ ವರೆಗೆ ಬಂದು ಪ್ರಯಾಣಿಕರನ್ನು ಇಲ್ಲಿಯೇ ಇಳಿಸಿ ಅಲ್ಲಿಂದಲೇ ವಾಪಾಸ್ ಹೋಗಬೇಕು.

Tags :
ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ: ನಗರದ ಸಂಚಾರಿ ಮಾರ್ಗಗಳಲ್ಲಿ ಭಾರಿ ಬದಲಾವಣೆ.!
Advertisement
Next Article