For the best experience, open
https://m.bcsuddi.com
on your mobile browser.
Advertisement

ಹುಬ್ಬಳ್ಳಿ ಕಾಂಗ್ರೆಸ್​ ಕಚೇರಿ ಮುಂದೆ ಯುವಕನ ಬರ್ಬರ ಕೊಲೆ..!

06:42 PM Jan 31, 2024 IST | Bcsuddi
ಹುಬ್ಬಳ್ಳಿ ಕಾಂಗ್ರೆಸ್​ ಕಚೇರಿ ಮುಂದೆ ಯುವಕನ ಬರ್ಬರ ಕೊಲೆ
Advertisement

ಹುಬ್ಬಳ್ಳಿ : ಹುಬ್ಬಳ್ಳಿಯ ಕಾಂಗ್ರೆಸ್​ ಕಚೇರಿ ಮುಂದೆ 28 ವರ್ಷದ ಯುವಕನ ಬರ್ಬರ ಹತ್ಯೆ ನಡೆದಿದ್ದು ಯುವಕನ ಗುರುತು  ಪತ್ತೆ ಹಚ್ಚುವ ಕಾರ್ಯ ಪೊಲೀಸರಿಂದ ಆರಂಭವಾಗಿದೆ.

ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಈ ಕೊಲೆ ನಡೆದಿದ್ದು ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಭೀಕರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಳೇ‌ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Author Image

Advertisement