ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನ..!

04:22 PM Sep 14, 2024 IST | BC Suddi
Advertisement

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಮದು ಸಾರಿಗೆ ಇಲಾಖೆ ಸೂಚನೆ ನೀಡಿದೆ.

Advertisement

ಈಗಾಗಲೇ ಸಾರಿಗೆ ಇಲಾಖೆಯು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಿದೆ. ಆದರೆ ಈವರೆಗೆ ಕೇವಲ 52 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ ಎಂದು ಹೇಳಲಾಗಿದೆ.

ಇನ್ನು ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ನಡೆಯಲಿದೆ. ಹೀಗಾಗಿ ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ. ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಅಥವಾ ವಾಹನ ಚಾಲಕರಿಗೆ ದಂಡ ವಿಧಿಸುವ ನಿರ್ಧಾರವನ್ನು ಸೆಪ್ಟೆಂಬರ್ 18ರ ನಂತರವೇ ಕೈಗೊಳ್ಳುತ್ತೇವೆ ಎಂದು ಕರ್ನಾಟಕ ಸಾರಿಗೆ ಆಯುಕ್ತ ಯೋಗೇಶ್ ತಿಳಿಸಿದ್ದಾರೆ.

ಒಟ್ಟಾರೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಣೆ ಬಗ್ಗೆ ಸೆಪ್ಟೆಂಬರ್ 18 ಹೈಕೋರ್ಟ್ ವಿಚಾರಣೆಯ ಬಳಿಕವೇ ಕರ್ನಾಟಕ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article