ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೆಸರುಕಾಳು ಹಾಗೂ ಸೂರ್ಯಕಾಂತಿ ಬೆಳೆದ ರೈತರಿಗೆ ಇಲ್ಲಿದೆ ಮಾಹಿತಿ.!

07:20 AM Aug 25, 2024 IST | BC Suddi
Advertisement

ಬೆಂಗಳೂರು: ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಹೆಸರು ಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಸಮ್ಮತಿ ಸೂಚಿಸಿದೆ.

Advertisement

ಗುಣಮಟ್ಟದ ಹೆಸರು ಕಾಳಿಗೆ ಪ್ರತಿ ಕ್ವಿಂಟಾಲ್ ಗೆ 8682 ರೂ., ಸೂರ್ಯಕಾಂತಿಗೆ 7280 ರೂಪಾಯಿಯಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ 22,215 ಮೆಟ್ರಿಕ್ ಟನ್ ಹೆಸರು ಕಾಳು, 13,210 ಮೆಟ್ರಿಕ್ ಟನ್ ಸೂರ್ಯ ಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ .

ಹೆಸರು ಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಖರೀದಿ ಏಜೆನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ . ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಫೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಾಗುವುದು. ಬಳಿಕ ತ್ವರಿತ ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಶುರುವಾಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article