For the best experience, open
https://m.bcsuddi.com
on your mobile browser.
Advertisement

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ನೀಡಲು ಅರ್ಜಿ..!

11:03 AM Feb 03, 2024 IST | Bcsuddi
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ನೀಡಲು ಅರ್ಜಿ
Advertisement

ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಮತ್ತು ಬ್ಯೂಟಿ ಪಾರ್ಲ‌್ರಮ್ಯಾನೇಜ್‌ಮೆಂಟ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿ ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

18ರಿಂದ 45 ವಯೋಮಾನದ ನಿರುದ್ಯೋಗಿ ಯುವಕ/ಯುವತಿಯ ರಿಗಾಗಿ ಫೆಬ್ರವರಿ ಮಾಹೆಯ ಅಂತ್ಯದಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಬ್ಯೂಟಿ ಪಾರ್ಲ‌'ಮ್ಯಾನೇಜ್ ಮೆಂಟ್ ತರಬೇತಿಗಳನ್ನು ನೀಡಲಾಗುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ.

ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.

Advertisement

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸ ಅಥವಾ 9980510717, 9483485489.

ಎಸ್ಕಾರ್ಟ್ಸ್ ಸಂಸ್ಥೆ ವತಿಯಿಂದ ದಿನಾಂಕ 5-2-2024 ರಿಂದ 7-2-2024 ರವರೆಗೆ ರೈತರಿಗೆ ಉಚಿತ ಮೂರೂ ದಿನಗಳ ಕಾಲ ತರಬೇತಿ ಇರುತ್ತದೆ.ಒಂದು ದಿನ ಟ್ರ್ಯಾಕ್ಟರ್ ಟೆಕ್ನಾಲಜಿ ಮತ್ತು ಎರಡು ದಿನ ಕೃಷಿ/ತೋಟಗಾರಿಕೆ (ಒಣ ಬೇಸಾಯ ಮತ್ತು ನಿರಾವರಿ) ಜೇನುಕೃಷಿ ಅಣಬೆ ಬೆಳೆಗಳ ಬಗ್ಗೆ ತರಬೇತಿ ಇರುತ್ತದೆ.

ಊಟ ವಸತಿಯೊಂದಿಗೆ ತರಬೇತಿ ನೀಡಲಾಗುತ್ತದೆ, ಸಂಪೂರ್ಣ ಉಚಿತವಾಗಿರುತ್ತದೆ. ಈ ತರಬೇತಿಗೆ ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತಿ ಇದ್ದಲ್ಲಿ ಈ ನಂಬರ್ ಗೆ 9741550853 ಕರೆ ಮಾಡಿ ನಿಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳಿ. ತರಬೇತಿಗೆ ಬರುವಾಗ ನಿಮ್ಮ ಆಧಾರ್ ಕಾರ್ಡ್ ಮತ್ತು ಎರಡು ಪಾಸಪೋರ್ಟ್‌ ಸೈಜ್‌ ಫೋಟೋ ತರಬೇಕು.

Author Image

Advertisement