ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೈನು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ

07:59 AM May 24, 2024 IST | Bcsuddi
Advertisement

 

Advertisement

ಚಿತ್ರದುರ್ಗ : ಹೈನು ಉತ್ಪಾದಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಎನ್‍ಎಲ್‍ಎಂ ಯೋಜನೆಯ ಅನುದಾನದಡಿ ಎನ್‍ಡಿಡಿಬಿ ಹಾಗೂ ಕರ್ನಾಟಕ ಸಹಕಾರ  ಹಾಲು ಮಹಾಮಂಡಳ ವತಿಯಿಂದ ಶಿಮುಲ್‍ಗೆ ರೂ.1.20 ಕೋಟಿ ಮೊತ್ತದ ಹಸಿರು ಮೇವಿನ ಬಿತ್ತನೆ ಬೀಜಗಳ ಹಂಚಿಕೆ ಮಾಡಲಾಗಿದೆ.

ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆಗೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವನ್ನು ಬೆಳೆಸಿ ಬಳಸುವುದು ಅತೀ ಮುಖ್ಯವಾಗಿರುತ್ತದೆ.

ಕಳೆದ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದ ಹಿನ್ನಲೆಯಲ್ಲಿ ಮೇವಿನ ಲಭ್ಯತೆ ಕಡಿಮೆಯಾದ್ದರಿಂದ ದುಬಾರಿ ಬೆಲೆ ತೆತ್ತು ಮೇವನ್ನು ಖರೀದಿಸಿ ನಷ್ಟ ಅನುಭವಿಸಿದ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಗಾರು ಹಂಗಾಮು ಪ್ರಾರಂಭವಾಗುವ ಮುನ್ನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ವಿವಿಧ ಮೇವಿನ ತಳಿಗಳ 3/5 ಕೆ.ಜಿ. ಕಿರು ಪೊಟ್ಟಣಗಳನ್ನು ರೈತರಿಗೆ ಉಚಿತವಾಗಿ ಪೂರೈಸಲು ನಿರ್ಧರಿಸಿದೆ.

ಪ್ರತಿಯೊಬ್ಬ ಹಾಲು ಉತ್ಪಾದಕರಿಗೂ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ವಿತರಿಸಿ ಹೆಚ್ಚು ಹಸಿರು ಮೇವು ಉತ್ಪಾದಿಸುವ ಮೂಲಕ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವಾಗಿ ಮಾರ್ಪಡಿಸಲು ಯೋಜಿಸಲಾಗಿದೆ.

ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಶೇಖರಣೆ ಆಧಾರದ ಮೇಲೆ  ಮಳೆ ಆಶ್ರಿತ ರೈತರು, ನೀರಾವರಿ ಹೊಂದಿರುವ ರೈತರನ್ನು ಗುರುತಿಸಿ ಯೋಜನೆಯ ನಿಯಮದಂತೆ ಮೇವಿನ ಜೀಜದ ಮಿನಿ ಕಿಟ್‍ಗಳನ್ನು ಹಂಚಿಕೆ ಮಾಡುವಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ.

2024-25ನೇ ಸಾಲಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರುದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ 120 ಮೆಟ್ರಿಕ್ ಟನ್ ಬಹುಕಟಾವು ಜೋಳ ಸಿಎಸ್‍ಹೆಚ್-24ಎಮ್‍ಎಫ್=20ಎಮ್‍ಟಿ, ಸಿಎಸ್‍ಹೆಚ್-43ಎಮ್‍ಎಫ್=90ಎಂಟಿ, ಮೆಕ್ಕೆಜೋಳ ಜೆ177-10ಎಂಟಿ ಮೇವಿನ ಬಿತ್ತನೆ ಬೀಜ ಹಂಚಿಕೆಯಾಗಿದೆ.

ಕೇಂದ್ರ ಸರ್ಕಾರದ ಎನ್,ಎಲ್,ಎಮ್ ಯೋಜನೆಯಡಿ ಒಕ್ಕೂಟಕ್ಕೆ ಹಂಚಿಕೆ ಮಾಡಲಾಗಿರುವ ಹಸಿರು ಮೇವಿನ ಬಿತ್ತನೆ ಬೀಜದ ಮಿನಿಕಿಟ್‍ಗಳನ್ನು ಹಾಲು ಉತ್ಪಾದಕರ ಸಹಾಕಾರ ಸಂಘಗಳ ಮೂಲಕ ಹಾಲು ಉತ್ಪಾದಕರಿಗೆ ಯೋಜನೆಯ ನಿಬಂಧನೆಯ ಅನುಸಾರ ಸಾಮಾನ್ಯ ವರ್ಗಕ್ಕೆ 70%, ಪ.ಜಾತಿ 20%, ಪ.ಪಂಗಡಕ್ಕೆ 10% ನಷ್ಟು, ಹಾಲು ಶೇಖರಣೆಯ ಆಧಾರದ ಮೇಲೆ ವಿತರಿಸಲು ಯೋಜಿಸಲಾಗಿದೆ.

ಹಾಲು ಉತ್ಪಾದಕರು ಈ ಯೋಜನೆಯಡಿ ಲಭ್ಯವಿರುವ ಮೇವಿನ ಬಿತ್ತನೆ ಬೀಜಗಳ ಮಿನಿ ಕಿಟ್‍ಗಳನ್ನು  ಉಚಿತವಾಗಿ ಪಡೆದು ಹಸಿರು ಮೇವು ಉತ್ಪಾದನೆ ಮಾಡಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಹೈನು ಉತ್ಪಾದಕ ರೈತರಿಗೆ ಗಡ್ ನ್ಯೂಸ್ ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ
Advertisement
Next Article