ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೊಸದಾಗಿ ಆರಂಭವಾಗುತ್ತಿರುವ ಅಶ್ವಮೇಧ ಕ್ಲಾಸಿಕ್​ ಬಸ್​​ ಗಳಲ್ಲೂ ಮಹಿಳೆಯರಿಗೆ ಉಚಿತ

12:16 PM Feb 05, 2024 IST | Bcsuddi
Advertisement

ಬೆಂಗಳೂರು: ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊಸದಾಗಿ ಆರಂಭಿಸುತ್ತಿದ್ದು, ಈ ಅಶ್ವಮೇಧ ಬಸ್ಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ.

Advertisement

ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ ಹಾಗೂ ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು.ಅದರಂತೆ, ಇದೀಗ ಅಶ್ವಮೇಧ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.

Advertisement
Next Article