ಹೊಸಪೇಟೆ: ಮಹಿಳಾ ಅಭಿವೃದ್ಧಿ ನಿಗಮದ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಹೊಸಪೇಟೆ: ವಿಜಯನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ನಿಗದಮ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಹಾಯಧನ ಸೌಲಭ್ಯ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 55 ವರ್ಷ ವಯೋಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಆಸಕ್ತ ಫಲಾಪೇಕ್ಷಿಗಳು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು. ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು, ಅರ್ಜಿದಾರರು ಸಚಿವರು, ಶಾಸಕರು, ಕರ್ನಾಟಕ ಸರ್ಕಾರ, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಡಿಸೆಂಬರ್ 22 ರೊಳಗೆ ಅರ್ಜಿ ಸಲ್ಲಿಸಬೇಕು.
ಈ ಹಿಂದೆ ಈ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹೊಸಪೇಟೆ ರಾಜಪೂರ ಪ್ರೈ ಬಿಲ್ಡಿಂಗ್, 3ನೇ ಮಹಡಿ ಕಾಲೇಜ್ ರಸ್ತೆ, ಟ್ರೆಂಡ್ಸ್ ಬಟ್ಟೆ ಅಂಗಡಿ ಎದುರು, ಹೊಸಪೇಟೆ, ಇಲ್ಲಿಗೆ ಅರ್ಜಿ ಸಲ್ಲಿಸುವ ಎಂದು ವಿಜಯನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.