ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

08:45 AM Dec 08, 2023 IST | Bcsuddi
Advertisement

 

Advertisement

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ಹುಣಸೇಕಟ್ಟೆ ಗೊಲ್ಲರಹಟ್ಟಿ ಗ್ರಾಮ ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರ ಹೋಬಳಿ ವಡೇರಹಳ್ಳಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. 2024ರ ಜನವರಿ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ಹುಣಸೇಕಟ್ಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ 8 ಎಎವೈ, 182 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 190 ಪಡಿತರ ಚೀಟಿಗಳಿವೆ. ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರ ಹೋಬಳಿ ವಡೇರಹಳ್ಳಿ ಗ್ರಾಮದಲ್ಲಿ 22 ಎಎವೈ, 73 ಪಿಹೆಚ್‍ಹೆಚ್, 4 ಎನ್.ಪಿ.ಹೆಚ್.ಹೆಚ್ ಸೇರಿದಂತೆ ಒಟ್ಟು 99 ಪಡಿತರ ಚೀಟಿಗಳಿವೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ನಿಗಧಿತ ಅರ್ಜಿ “ಎ” ಅನ್ನು ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಅಥವಾ ಸಂಬಂಧಪಟ್ಟ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Tags :
ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.!
Advertisement
Next Article