ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ ಗಳ ನಡೆಸುವವರು ಕೆಟಿಟಿಎಫ್ ರಡಿ ನೋಂದಣಿ ಕಡ್ಡಾಯ
ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದಿರುವ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ ಗಳ ಉದ್ದಿಮೆದಾರರು, ಟೂರ್ಸ್ ಅಂಡ್ ಟ್ರಾವೆಲ್ಸ್ ಅಪರೇಟರ್ಸ್‍ಗಳು, ಕರ್ನಾಟಕ ಟೂರಿಸ್ಟ್ ಟ್ರೇಡ್ ಫೆಸಿಲಿಟೇಶನ್ ((Karnataka Tourism Trade Facilitation) ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ https://kttf.karnatakatourism ನೊಂದಾಯಿಸಿ ಪ್ರಮಾಣ ಪತ್ರವನ್ನು ಪಡೆಯಬೇಕಾಗಿರುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ ಹೋಂಸ್ಟೇ ಪ್ರಾರಂಭಿಸಲು ಇಚ್ಚಿಸುವವರು hಣಣಠಿs://https://kttf.karnatakatourism.org ಅರ್ಜಿ ಸಲ್ಲಿಸಿ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿರುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ ಪರವಾನಗಿ ಇಲ್ಲದೆ ನಡೆಸುತ್ತಿದ್ದು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ನಿಯಮಾನುಸಾರ ನೊಂದಣಿ ಮಾಡಿಸಬೇಕು. ಇಲ್ಲವಾದಲ್ಲಿ ಪರವಾನಗಿ ಇಲ್ಲದ ಹೋಂ ಸ್ಟೇಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ಇಲ್ಲಿ ಪಡೆಯಬಹುದು. ದೂರವಾಣಿ ಸಂಖ್ಯೆ:08192-230123