ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಬೃಹತ್ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿತ

11:16 AM Jun 19, 2024 IST | Bcsuddi
Advertisement

ಪಾಟ್ನಾ: 12 ಕೋಟಿ ರೂ. ವೆಚ್ಚದಲ್ಲಿ ಬಿಹಾರದ ಅರಾರಿಯಾದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆಯು ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿದೆ.

Advertisement

ಸೇತುವೆ ಕುಸಿದು ಬಿದ್ದಿರುವ ವೀಡಿಯೋವನ್ನು ಸಾರ್ವಜನಿಕರು ಸೆರೆಹಿಡಿದಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಸೇತುವೆ ಒಂದು ಬದಿಗೆ ವಾಲಿರುವುದನ್ನು ತೋರಿಸುತ್ತದೆ. ಈ ವೇಳೆ ಸೇತುವೆಯ ಬಳಿ ನದಿಯ ದಡದಲ್ಲಿ ನಿಂತಿದ್ದ ಜನ ಈ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಕುಸಿದ ಸೇತುವೆಯ ಭಾಗವು ಕೆಲವೇ ಕ್ಷಣಗಳಲ್ಲಿ ಕೊಚ್ಚಿಕೊಂಡು ಹೋಯಿತು. ಈ ಘಟನೆಯಲ್ಲಿ ಸದ್ಯ ಯಾವುದೇ ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

 

Advertisement
Next Article