ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

13 ಕ್ಷೇತ್ರಗಳ ಬೈ ಎಲೆಕ್ಷನ್ ಫಲಿತಾಂಶ ಇಂದು ಪ್ರಕಟ

09:58 AM Jul 13, 2024 IST | Bcsuddi
Advertisement

ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಭಾರೀ ಕುತೂಹಲ ಮೂಡಿಸಿದೆ.

Advertisement

ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಉಪ ಚುನಾವಣೆಯ ಫಲಿತಾಂಶದಲ್ಲಿ ಆಡಳಿತರೂಢ ಎನ್‌ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಇದರಲ್ಲಿ ಯಾರಿಗೆ ಮುನ್ನಡೆ ಸಿಗಲಿದೆ ಎಂದು ಕಾದು ನೋಡಬೇಕಿದೆ.

ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್, ಪಂಜಾಬ್‌ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಘರ್, ಬಿಹಾರದ ರುಪೌಲಿ, ಮಧ್ಯಪ್ರದೇಶದ ಅಮರ್ವಾರಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆದಿದೆ. ಈ ಪೈಕಿ ನಾಲ್ಕು ರಾಜ್ಯಗಳನ್ನು ಇಂಡಿಯಾ ಒಕ್ಕೂಟ ಆಡಳಿತ ನಡೆಸುತ್ತಿದೆ. ಉಳಿದ ರಾಜ್ಯಗಳಲ್ಲಿ ಬಿಜೆಪಿ ಅಥವಾ ಎನ್‌ಡಿಎ ಸರ್ಕಾರ ಆಡಳಿತ ನಡೆಸುತ್ತಿದೆ.

 

Advertisement
Next Article