ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

2024 ಲೋಕಸಭಾ ಚುನಾವಣೆ: ಇಂದು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ

11:55 AM Dec 19, 2023 IST | Bcsuddi
Advertisement

ನವದೆಹಲಿ: ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ಬಳಿಕ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಇಂಡಿಯಾ ಮೈತ್ರಿಕೂಟ ಮುಂದಾಗಿದೆ. ಚುನಾವಣಾ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರದ ಬಗ್ಗೆ ಇಂದು ನಡೆಯುವ ಮಹತ್ವದ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

Advertisement

ಇಂದಿನ ಸಭೆಯಲ್ಲಿ "ಮೇನ್ ನಹಿಂ, ಹಮ್ ಎಂಬ ಥೀಮ್ ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ. ಇಂದು ನಡೆಯವ ಪ್ರತಿಪಕ್ಷಗಳ ಒಕ್ಕೂಟದ ನಾಲ್ಕನೇ ಸಭೆಯಾಗಿದೆ. ಜೂನ್ 23 ರಂದು ಪಾಟ್ನಾದಲ್ಲಿ ಮೊದಲ ಸಭೆ ನಡೆದಿತ್ತು. ಜುಲೈ 17-18 ರಂದು ಬೆಂಗಳೂರಿನಲ್ಲಿ 2ನೇ ಸಭೆ ಮತ್ತು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರ ನಡುವೆ ಮುಂಬೈನಲ್ಲಿ ಮೂರನೇ ಸಭೆ ನಡೆದಿತ್ತು. ಅಲ್ಲಿ 27 ಪಕ್ಷಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಣಯಗಳನ್ನು ಅಂಗೀಕರಿಸಿದ್ದವು.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, 2024ರ ಸಾರ್ವತ್ರಿಕ ಚುನಾವಣೆ ನಂತರ ಪ್ರಧಾನ ಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಹೇಳಿದರು. ಬಿಜೆಪಿಯನ್ನು ಪ್ರತಿಪಕ್ಷಗಳು ಸೋಲಿಸಲಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವೆ ತ್ರಿಕೋನ ಮೈತ್ರಿ ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Advertisement
Next Article