For the best experience, open
https://m.bcsuddi.com
on your mobile browser.
Advertisement

'29 ರೂ.ಗೆ ಸಿಗಲಿದೆ ಭಾರತ್‌ ಬ್ರ್ಯಾಂಡ್‌ ಅಕ್ಕಿ' - ಕೇಂದ್ರ ಸರ್ಕಾರ

09:48 AM Feb 03, 2024 IST | Bcsuddi
 29 ರೂ ಗೆ ಸಿಗಲಿದೆ ಭಾರತ್‌ ಬ್ರ್ಯಾಂಡ್‌ ಅಕ್ಕಿ    ಕೇಂದ್ರ ಸರ್ಕಾರ
Advertisement

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ಮುಂದಿನ ವಾರದಿಂದ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ ಮಾರಾಟ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾಹಿತಿ ನೀಡಿದ್ದು, ನೇರವಾಗಿ ಕೇಂದ್ರ ಸರ್ಕಾರವೇ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದ್ದು, ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದರು.

ಇನ್ನು ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದ್ದು, ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ. ನಂತೆ ಅಕ್ಕಿ ಮಾರಾಟ ಮಾಡಲಿದೆ ಎಂದು ತಿಳಿಸಿದ್ದಾರೆ.

Advertisement

Author Image

Advertisement