ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್: ಸಿಎಂ, ಡಿಸಿಎಂಗೆ ಜಾಮೀನು ಮಂಜೂರು

01:42 PM Jun 01, 2024 IST | Bcsuddi
Advertisement

ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.

Advertisement

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿತ್ತು. ಹೀಗಾಗಿ ಇಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯಕ್ಕೆ ವಿಚಾರಣೆಗೆಂದು ಹಾಜರಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.

ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ 40% ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.

 

Advertisement
Next Article