ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ

02:08 PM Apr 08, 2024 IST | Bcsuddi
Advertisement

ನವದೆಹಲಿ: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

Advertisement

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಈ ಹಿಂದೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಮಾ. 22 ರಂದು ನ್ಯಾ. ಕೆ.ಸೋಮಶೇಖರ್ ಹಾಗೂ ನ್ಯಾ. ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

ಯಾವುದೇ ಶಾಲೆಗಳು ಕೂಡ ಫಲಿತಾಂಶವನ್ನು ಪ್ರಕಟಿಸಬಾರದು. ಫಲಿತಾಂಶ ಪ್ರಕಟಣೆಗೆ ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮಾರ್ಚ್​ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸುವಂತೆ ಸೂಚಿಸಿತ್ತು. ಹೈಕೋರ್ಟ್ ನ ಸೂಚನೆಯಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದವು. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಗೊಳಿಸುವ ಸಂದರ್ಭದಲ್ಲು ಸುಪ್ರೀಂ ತಡೆಯಾಜ್ಞೆ ನೀಡಿದೆ.

Advertisement
Next Article