ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

577 ಅಂಗನವಾಡಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.!

10:32 AM Oct 20, 2024 IST | BC Suddi
Advertisement

ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಾದ ಮಹಿಳಾ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಹುದ್ದೆಗಳ ಕುರಿತ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

Advertisement

ಹುದ್ದೆಯ ವಿವರ :

ಉದ್ಯೋಗ ಇಲಾಖಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು :ಕಾರ್ಯಕರ್ತೆ, ಸಹಾಯಕಿ
ಒಟ್ಟು ಹುದ್ದೆಗಳ ಸಂಖ್ಯೆ :577
ಅಂಗನವಾಡಿ ಸಹಾಯಕಿ ಹುದ್ದೆಗಳ ಸಂಖ್ಯೆ :106
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ :471

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳಿಗೆ ಅರ್ಹತೆಗಳು :

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ತೇರ್ಗಡೆ ಆಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ ಆಗಿರಬೇಕು.
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಸುವ ವಿಧಾನ :

“karnemakaone.kar.nic.in/abcd/ApplicationForm_JA_org.aspx” ವೆಬ್‌ಗೆ ಭೇಟಿ ನೀಡಿ.
ಹುದ್ದೆ ಬಯಸುವ ಜಿಲ್ಲೆ ಬಾಗಲಕೋಟೆ >> ತಾಲ್ಲೂಕು >> ಅಧಿಸೂಚನೆ ಸಂಖ್ಯೆ >> ಹುದ್ದೆ’ ಆಯ್ಕೆ ಮಾಡಿ.
ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ. ಆನ್‌ಲೈನ್‌ ಅರ್ಜಿ ನಮೂನೆ ಓಪನ್‌ ಆಗುತ್ತದೆ.
ಕೇಳಲಾದ ಸಂಪೂರ್ಣ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.
ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಿರಿ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :ಅಕ್ಟೋಬರ್‌ 16, 2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :ನವ್ಹಂಬರ್‌ 15, 2024
ಅಗತ್ಯ ದಾಖಲೆಗಳು :

1. ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ.
2. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
3. ವಾಸಸ್ಥಳ ದೃಢೀಕರಣ ಪತ್ರ.
4. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
5. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
10. ಇತರೆ ಅಗತ್ಯ ಮತ್ತು ಸಂಬಂಧಿತ ದಾಖಲೆಗಳು.

 

https://anganwadirecruit.kar.nic.in/

Advertisement
Next Article