ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

6 ವರ್ಷದ ಮಕ್ಕಳಿಗೂ ಹೆಲ್ಮೆಟ್​​ ಕಡ್ಡಾಯ - ಸಂಚಾರಿ ಪೊಲೀಸರ ಆದೇಶ

12:03 PM Feb 10, 2024 IST | Bcsuddi
Advertisement

ಬೆಂಗಳೂರು: ಪುಟ್ಟ ಮಕ್ಕಳು ಹೆಲ್ಮೆಟ್ ಇಲ್ಲದೆ ಶಾಲೆಗಳ ಬಳಿ ಬರುತ್ತಿದ್ದಹಿನ್ನಲೆ 6 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

Advertisement

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗೋ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇನ್ನು ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಪ್ರತಿದಿನ ಸಂಚಾರ ನಿಯಮ‌ ಉಲ್ಲಂಘನೆ ಮಾಡಿ ನಮಗೂ ಅದಕ್ಕೂ ಸಂಬಂಧವೇ ಇಲ್ಲ ಅನ್ನೋ‌ ರೀತಿ ಕೆಲವರು ಇದ್ದಾರೆ. ಹಾಗಾಗಿ ಇದೀಗ ಮನೆ ಮನೆಗೆ ತೆರಳಿ ದಂಡ ವಸೂಲಿ ಮಾಡುವ ಕೆಲಸ ಶುರು ಪ್ರಾರಂಭಿಸಿದ್ದಾರೆ.

Advertisement
Next Article