For the best experience, open
https://m.bcsuddi.com
on your mobile browser.
Advertisement

Breaking: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣಗೆ ಬಿಜೆಪಿ ಅಭ್ಯರ್ಥಿ ಘೋಷಣೆ: ನಳಿನ್ ಕುಮಾರ್ ಕಟೀಲ್​ಗೆ ಶಾಕ್!

06:06 PM Oct 01, 2024 IST | BC Suddi
breaking  ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣಗೆ ಬಿಜೆಪಿ ಅಭ್ಯರ್ಥಿ ಘೋಷಣೆ  ನಳಿನ್ ಕುಮಾರ್ ಕಟೀಲ್​ಗೆ ಶಾಕ್
Advertisement

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದ ವರಿಷ್ಟರು ವಿಧಾನಪರಿಷತ್‌‌ನ ಅವಿಭಜಿತ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಕಿಶೋರ್ ಕುಮಾರ್ ಪುತ್ತೂರು ಅವರ ಹೆಸರನ್ನು ಅಂತಿಮಗೊಳಿಸಿದೆ.

Advertisement

ಕಿಶೋರ್ ಕುಮಾರ್ ಬೊಟ್ಯಾಡಿ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ವಿದ್ಯಾರ್ಥಿ ಜೀವನದಲ್ಲೆ ಅಖಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ವಿವಿಧ ಜವಾಬ್ದಾರಿಯನ್ನು ಪಡೆದು ಹಿಂದೂ ಮತ್ತು ಸಂಘಟನೆಗೋಸ್ಕರ ಅನೇಕ ಕೇಸುಗಳನ್ನು ಎದುರಿಸಿಕೊಂಡು ನಂತರ ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ಬಜೆಪಪಿಯ ವಿವಿಧ ಹುದ್ದೆಗಳನ್ನು ಅಲಂಕರಿಸಿ ಇದೀಗ ಒಬ್ಬ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನಿಗೆ ಎಂ.ಎಲ್‌‌.ಸಿ ಟಿಕೆಟ್‌ ಸಿಕ್ಕಿರುವುದು ಕಾರ್ಯಕರ್ತರಲ್ಲಿ ಸಂತಸ ತಂದಿದೆ.

ಇವರ ತಂದೆ ಬೊಟ್ಯಾಡಿ ರಾಮಣ್ಣ ಭಂಡಾರಿ ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದು ಹಿಂದೂತ್ವಕೋಸ್ಕರ, ಸಂಘಟನೆಗೋಸ್ಕರ, ಮತ್ತು ಪಕ್ಷಕ್ಕೋಸ್ಕರ ದುಡಿದ ಮಹಾನುಭಾವಿ. ಕಳೆದ ಬಾರಿಯ ಪುತ್ತೂರು ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಬಹುತೇಕ ಖಚಿತವಾಗಿ ಕಿಶೋರ್ ಕುಮಾರ್‌ರವರ ಹೆಸರು ಕೇಳಿಬಂದಿತ್ತು. ನಂತರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇವರ ಹೆಸರು ಚಾಲ್ತಿಯಲ್ಲಿತ್ತು.

Author Image

Advertisement