ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ದಾಖಲಾತಿಗೆ ಪ್ರವೇಶ ಪರೀಕ್ಷೆ

07:11 AM May 04, 2024 IST | Bcsuddi
Advertisement

 

Advertisement

 ದಾವಣಗೆರೆ: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಮೇ.19 ರಂದು ನಡೆಸಲಾಗುವುದು.

ವಿದ್ಯಾರ್ಥಿಗಳ ಪ್ರವೇಶ ಪತ್ರ  (HALL TICKET) ವನ್ನು ಜಿಲ್ಲಾ ಅಧಿಕಾರಿಗಳ ಕಚೆÉೀರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 44, ಜಿಲ್ಲಾಡಳಿತ ಭವನ, ಪಿ.ಬಿ ರಸ್ತೆ, ಕರೂರು ಕ್ರಾಸ್, ದಾವಣಗೆರೆ ಇಲ್ಲಿ ವಿತರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಸೇವಾಸಿಂಧು ಪೆÇೀರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರ  (HALL TICKET) ವನ್ನು ಪಡೆದುಕೊಳ್ಳುವಂತೆ ತಿಳಿಸಿದೆ. ಹಾಗೂ ಪ್ರವೇಶ ಪತ್ರ ಪಡೆಯಲು ಬರುವ ವಿದ್ಯಾರ್ಥಿ, ಪೆÇೀಷಕರು ವಿದ್ಯಾರ್ಥಿಯ ಪಾಸ್‍ಪೆÇೀರ್ಟ್ ಅಳತೆಯ ಎರಡು ಭಾವಚಿತ್ರ, ಆಧಾರಕಾರ್ಡ್, ಅರ್ಜಿ ಸಲ್ಲಿಸಿರುವ ಪ್ರತಿಯನ್ನು ಕಡ್ಡಾಯವಾಗಿ ತರಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

Tags :
ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ದಾಖಲಾತಿಗೆ ಪ್ರವೇಶ ಪರೀಕ್ಷೆ
Advertisement
Next Article