ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರಿಗೆ ಗುಡ್ ನ್ಯೂಸ್ : ಮುಖ್ಯ ಮಂತ್ರಿ ಸಿದ್ದರಾಮಯ್ಯ.!

07:37 AM Oct 13, 2024 IST | BC Suddi
Advertisement

 

Advertisement

ಬೆಂಗಳೂರು : ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಮೂಲಕ  ರೈತ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯನವರು  ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತ ಸಮುದಾಯದ ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿದರು. ಈ ವೇಳೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡುವುದಕ್ಕೆ ಸರ್ಕಾರ ಬದ್ದವಾಗಿದೆ. ವಿಧಾನ ಪರಿಷತ್‌ನಲ್ಲಿ ಪಕ್ಷ ಬಹುಮತ ಸಾಧಿಸಿದ ನಂತರ ತಿದ್ದುಪಡಿ ವಿಧೇಯಕ ಮಂಡಿಸಿ ಹಿಂದಿನ ಕಾಯ್ದೆ ಮರು ಸ್ಥಾಪಿಸಲಾಗುವುದು. ನೀರಾವರಿ ಪಂಪ್‌ಸೆಟ್‌ಗಳಿಗೆ ರೈತರ ಆಧಾ‌ರ್ ಸಂಖ್ಯೆ ಜೋಡಣೆ ಮಾಹಿತಿಯಿಲ್ಲ. ಈ ಬಗ್ಗೆ ವಿವರ ಪಡೆದು ಸೂಕ್ತ ಕ್ರಮವಹಿಸುವೆ ಎಂಬ ಭರವಸೆ ನೀಡಿದರು. ಇನ್ನುಳಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಕ್ರಮವಹಿಸುವೆ. ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡುವೆ ಎಂದು ಸಿದ್ದರಾಮಯ್ಯ ತಿಳಿಸಿದರು.

Tags :
Good news for farmers: Chief Minister Siddaramaiah!
Advertisement
Next Article