ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

HSRP ಅಳವಡಿಕೆಗೆ ಜೂನ್ 12ಕ್ಕೆ ಅಂತಿಮ ಗಡುವು..!

04:53 PM Jun 08, 2024 IST | Bcsuddi
Advertisement

ಕರ್ನಾಟಕ : 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಐದು ದಿನಗಳಲ್ಲಿ ಮುಕ್ತಾಯವಾಗಲಿದೆ.

Advertisement

ಹೈಕೋರ್ಟ್‌ಗೆ ಮಾಹಿತಿ ನೀಡಿದ್ದ ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿತ್ತು.

ವಿಭಾಗೀಯ ಪೀಠವು ಮುಂದಿನ ವಿಚಾರಣೆಯನ್ನು ಜೂನ್ 11 ರಂದು ಕೈಗೆತ್ತಿಕೊಳ್ಳಲಿದೆ. ಒಂದು ವೇಳೆ ಕೋರ್ಟ್ ಸರ್ಕಾರದ ಪರವಾಗಿ ಆದೇಶ ನೀಡಿದರೆ ವಾಹನ ಸವಾರರ ಮೇಲೆ ಸರ್ಕಾರ ದಂಡಾಸ್ತ್ರ ಪ್ರಯೋಗಿಸುವುದು ಖಚಿತವಾಗುತ್ತದೆ.

 

ಗಡುವು ವಿಸ್ತರಣೆಗೆ ಅರ್ಜಿ ಸಲ್ಲಿಕೆ
ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ ಮಾಡಿರುವ ಬಗ್ಗೆ ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದರು. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ತಯಾರಿಸುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌, ಗಡುವು ವಿಸ್ತರಣೆಗೆ ಮನವಿ ಮಾಡಿತ್ತು.

 

ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 50 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.50 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಹೇಳಲಾಗಿದೆ.

 

https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.

ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ.

ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

ನಂಬರ್ ಪ್ಲೇಟ್ ಬದಲಾಯಿಸಲು ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.

ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. (ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶ ಇಲ್ಲ).

ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.

ಎಚ್‌ಎಸ್‌ಆರ್ ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

Advertisement
Next Article