For the best experience, open
https://m.bcsuddi.com
on your mobile browser.
Advertisement

ಗೃಹಲಕ್ಷ್ಮಿ ಯೋಜನೆಯಡಿ ನಿಮ್ಮ ಖಾತೆಗೆ ಹಣ ಬಂದಿಲ್ಲ.? ಹಾಗಾದರೆ ಈ ಕೆಲಸ ಮಾಡಿ.!

07:39 AM May 04, 2024 IST | Bcsuddi
ಗೃಹಲಕ್ಷ್ಮಿ ಯೋಜನೆಯಡಿ ನಿಮ್ಮ ಖಾತೆಗೆ ಹಣ ಬಂದಿಲ್ಲ   ಹಾಗಾದರೆ ಈ ಕೆಲಸ ಮಾಡಿ
Advertisement

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿತಿಂಗಳು 2,000 ರೂ. ನೀಡಲಾಗುತ್ತಿದ್ದು, ಇನ್ನೂ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಒಟ್ಟಿಗೆ ಹಣ ಜಮಾ ಆಗಲಿದೆ.

ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ ಎಂಟನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ

Advertisement

ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ–ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ–ಕೆವೈಸಿ ಅಪ್ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.

Tags :
Author Image

Advertisement