ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

PSI ಪರೀಕ್ಷೆ ಮುಂದೂಡಿಕೆ ಮಾಡಿ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ

01:32 PM Sep 09, 2024 IST | BC Suddi
Advertisement

ಬೆಂಗಳೂರು: ಯುಪಿಎಸ್‌ಸಿ ಮತ್ತು PSI ಪರೀಕ್ಷೆ ಒಂದೇ ದಿನಾಂಕ ನಿಗದಿಯಾಗಿರೋದಕ್ಕೆ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಕೆಲವರು ಮುಂದೂಡಿಕೆ ಮಾಡಿ ಎಂದು ಆಗ್ರಹಿಸುತ್ತಿದ್ದರೆ ಇತ್ತ ಸರ್ಕಾರ ಮುಂದೂಡಿಕೆ ಮಾಡೋದಿಲ್ಲ ಎಂದೆಲ್ಲ ಹೇಳುತ್ತಿದೆ. ಇದರಿಂದ ಎರಡು ಪರೀಕ್ಷೆಗಳನ್ನ ಬರೆಯುವ ಕೆಲ ವಿದ್ಯಾರ್ಥಿಗಳಿಗೆ ತೊಂದರೆ ಅಂತೂ ಆಗುತ್ತಿದೆ. ಈಗ ಪಿಎಸ್‌ಐ ಪರೀಕ್ಷೆ ಮುಂದೂಡಿಕೆ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಹ ರಾಜ್ಯ ಸರ್ಕಾರವನ್ನ ಒತ್ತಾಯಿಸಿದ್ದಾರೆ.

Advertisement

ತಮ್ಮ X ಖಾತೆ ಮೂಲಕ ಆಗ್ರಹಿಸಿರುವ ವಿಜಯೇಂದ್ರ ಕೆಪಿಎಸ್‌ಸಿ ಪರೀಕ್ಷೆಯ ಗೊಂದಲಗಳ ನಡುವೆ ಹಠಕ್ಕೆ ಬಿದ್ದವರಂತೆ ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿತ್ತು. ಇದೀಗ ಅಂತದ್ದೇ ಮತ್ತೊಂದು ಎಡವಟ್ಟು ಮಾಡಲು ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 22ರಂದು ಯುಪಿಎಸ್ಸಿ ಹಾಗೂ ಎಸ್‌.ಎಸ್.ಸಿ ಪರೀಕ್ಷೆಗಳ ದಿನಾಂಕ ನಿಗದಿಯಾಗಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಉದ್ಯೋಗಾಕಾಂಕ್ಷಿಗಳ ವಿರೋಧಿ ಧೋರಣೆ ಅಲ್ಲದೆ ಬೇರೇನೂ ಅಲ್ಲ.

ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆಪ್ಟೆಂಬರ್ 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆಪ್ಟೆಂಬರ್ 5 ರಂದೇ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ ಹಂಚಿಕೆಯಲ್ಲಿಯೂ ವ್ಯತ್ಯಯ ಕಂಡುಬಂದಿದ್ದು ತಾತ್ಕಾಲಿಕವಾಗಿ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆಯನ್ನೂ ಸಹ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್‌ಸಿ ಹಾಗೂ ಸರ್ಕಾರದ ಹುಳುಕು ಬಯಲಾಗಿದೆ. ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಮತ್ತೊಮ್ಮೆ ಸಂಕಷ್ಟಕ್ಕೆ ದೂಡುವ ಮುನ್ನವೇ ರಾಜ್ಯದ ಸರ್ಕಾರ ಸೆಪ್ಟೆಂಬರ್ 22 ರಂದು ನಡೆಸಲು ನಿರ್ಧರಿಸಿರುವ ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಗಳಾಗದಂತೆ ಎಚ್ಚರ ವಹಿಸುವಂತೆ ಆಗ್ರಹಿಸುತ್ತೇನೆ. ಈಗ ರಾಜ್ಯ ಸರ್ಕಾರ PSI ಪರೀಕ್ಷೆಯ ದಿನಾಂಕ ಬದಲಾಯಿಸಲಿದ್ಯಾ ಅನ್ನೋದ್ರ ಬಗ್ಗೆ ಒಂದು ಸ್ಪಷ್ಟತೆ ನೀಡಬೇಕಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article