ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

SSLC: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಬಂಪರ್ ಬಹುಮಾನ ನೀಡಿದ ಸಿದ್ದರಾಮಯ್ಯ

09:11 AM May 15, 2024 IST | Bcsuddi
Advertisement

ಬೆಂಗಳೂರು : 2023-2024 ನೇ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.

Advertisement

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. ಅಲ್ಲದೇ ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿಸಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.

ಇನ್ನೂ ಈ ಸಂದರ್ಭದಲ್ಲಿ ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.

 

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಕುಮಾರಿ ಅಂಕಿತ
ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಮಾತನಾಡಿ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

Advertisement
Next Article