ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

UPDATE: ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಢಿಕ್ಕಿ- ಸಾವಿನ ಸಂಖ್ಯೆ 13ಕ್ಕೆ ಏರಿಕೆ

09:49 AM Jun 28, 2024 IST | Bcsuddi
Advertisement

ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಬ್ಯಾಡಗಿಯ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವದಲ್ಲಿ ನಡೆದಿದೆ.

Advertisement

ಟಿಟಿ ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಜನ ಮಹಿಳೆಯರು, ಒಂದು ಮಗು, ಅಜ್ಜಿ, ಓರ್ವ ಅಂಗವಿಕಲ ಯುವತಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಹಾಗೂ ಟಿಟಿ ವಾಹನದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವನ್ನಪ್ಪಿದವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆ ಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ. ಮೃತರು ಬೆಳಗಾವಿ ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಮಾಡಿಕೊಂಡು ತಮ್ಮ ಊರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನವು ಹಿಂದಿನಿಂದ ಗುದ್ದಿದ ಪರಿಣಾಮವಾಗಿ ವಾಹನದಲ್ಲಿ ಪ್ರಯಾಣಿಸುತ್ತಿದ್ದವರು ಸಾವನ್ನಪ್ಪಿದ್ದು, ಅವರ ಮೃತದೇಹಗಳು ಅಪ್ಪಚ್ಚಿಯಾಗಿದೆ. ಹಾಗೂ ಅಪಘಾತದ ರಭಸಕ್ಕೆ ಟಿಟಿ ವಾಹನ ನಜ್ಜುಗುಜ್ಜಾಗಿದೆ.

 

Advertisement
Next Article